ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥಾಪನೆ- ಸಾರ್ವಜನಿಕರಿಂದ ಆಕ್ಷೇಪ

(ನ್ಯೂಸ್ ಕಡಬ) newskadaba.com ಜೂ. 19. ನಗರದ ಹತ್ತು ಪ್ರಮುಖ ಮೆಟ್ರೋ ನಿಲ್ದಾಣಗಳಾದ ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್​. ಎಂ ವಿಶ್ವೇಶ್ವರಯ್ಯ, ಮೆಜೆಸ್ಟಿಕ್, ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿ ನಿಲ್ದಾಣಗಳಲ್ಲಿ ಕಿಯೋಸ್ಕ್‌ ಮಳಿಗೆ ಸ್ಥಾಪಿಸಲು ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಬಿಎಂಆರ್‌ಸಿಎಲ್ ಅಮುಲ್ ಕಿಯೋಸ್ಕ್‌ ಮಳಿಗೆ ಸ್ಥಾಪಿಸಲು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ಲಿಮಿಟೆಡ್‌ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ಸದ್ಯ ಈ ವಿಚಾರ ಚರ್ಚೆಗೆ ಎಡೆಮಾಡಿಕೊಟ್ಟಿದ್ದು, ನಮ್ಮದೇ ರಾಜ್ಯದ ಕೆಎಂಎಫ್​ ನಂದಿನಿ ಇರುವಾಗ ಅಮುಲ್​ಗೆ ಏಕೆ ಅವಕಾಶ ನೀಡುವುದು ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವರದಿಗಳ ಪ್ರಕಾರ ಮಳಿಗೆಗಳ ಸ್ಥಾಪನೆಗಾಗಿ ಬಿಎಂಆರ್‌ಸಿಎಲ್ ಟೆಂಡರ್​​ ಕರೆದಿದ್ದು, ಆ ಟೆಂಡರ್​ ಅಮುಲ್ ಪಾಲಾಗಿದೆ ಎನ್ನಲಾಗುತ್ತಿದೆ.​ ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದಲ್ಲದೇ ಸಾರ್ವಜನಿಕರ ಅಸಮಾಧಾನಕ್ಕೂ ಕಾರಣವಾಗಿದೆ. ಕರ್ನಾಟಕದ​ ನಂದಿನಿ ಇರುವಾಗ ಗುಜರಾತ್​ನ ಅಮುಲ್​ಗೆ ಏಕೆ ಅವಕಾಶ ಎಂದು ಆಕ್ರೋಶ ಕೇಳಿ ಬರುತ್ತಿದೆ.

ಈ ಕುರಿತಾಗಿ ಜೆಡಿಎಸ್​ ಟ್ವೀಟ್ ಮಾಡಿದ್ದು, ಕಮಿಷನ್‌ ಆಸೆಗೆ ಸ್ವಾಭಿಮಾನ ಮಾರಿಕೊಂಡ ಡಿಕೆ ಶಿವಕುಮಾರ್​! ಡೂಪ್ಲಿಕೇಟ್‌ ಸಿಎಂ ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲಾಗಿದೆ. ಚುನಾವಣೆಗೂ ಮುಂಚೆ #SaveNandini, ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಪುಂಗೀ ಬಿಡುತ್ತಿದ್ದ ಡಿಕೆ ಶಿವಕುಮಾರ್​, ಕಮಿಷನ್‌ ಆಸೆಗೆ ಇಂದು ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ಮಣೆಹಾಕಿದ್ದಾರೆ ಎಂದು ವಾಗ್ದಾಳಿ ಮಾಡಿದೆ.

Scroll to Top