ಲಾರಿ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಇಬ್ರಾಹಿಂ ಎನ್ ಎಂದು ಗುರುತಿಸಲಾಗಿದೆ.‌‌‌‌

ದ್ವಿಚಕ್ರ ವಾಹನ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರು ‌ಕಡೆಗೆ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top