ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.







ಯೋಜನೆಗಳು ಮತ್ತು ಸೌಲಭ್ಯಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ  (Fresh Students) ಸ್ವಾತಂತ್ರ್ಯ ಮಹೋತ್ಸವದ ಅಮೃತಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ.
ಯೋಜನೆಗಳಲ್ಲಿ ಸೌಲಭ್ಯಪಡೆಯಲು ಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್‍ನ ಗ್ರಾಮಒನ್/ ಬೆಂಗಳೂರು ಒನ್ / ಕರ್ನಾಟಕ ಒನ್ ಮೂಲಕ ಆನ್ ಲೈನ್‍ ನಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ವೆಬ್‍ಸೈಟ್ https://www.kaushalkar.com  ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 2 ರೊಳಗೆ ಸಲ್ಲಿಸುವುದು.
ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ವೆಬ್‍ಸೈಟ್ https://kvcdc.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 0824-2456544 ಸಂಪರ್ಕಿಸಬಹುದು ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಚೇರಿ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top