ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳು ಮತ್ತು ಸೌಲಭ್ಯಗಳು:- ಶೈಕ್ಷಣಿಕ ಸಾಲ ಯೋಜನೆಗಳು (ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ ಯೋಜನೆ,  ಸ್ವಾವಲಂಭಿ ಸಾರಥಿ ಯೋಜನೆ. ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನ.







ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ ಸೈಟ್ http://ambigaradevelopment.karnataka.gov.in  (ದೂರವಾಣಿ ಸಂಖ್ಯೆ 080-22864099) ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top