(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ “ನಮ್ಮೂರ ಶಾಲೆಗೆ ನಮ್ಮ ಯುವಜನರು” ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹಧನ ರೂ. 1 ಲಕ್ಷಗಳ ಅನುದಾನ ನೀಡಲಾಗುತ್ತದೆ.
ಈ ಪೈಕಿ ರೂ. 10,000 ಗಳನ್ನು ಶಾಲೆಯ ದೈಹಿಕ ಶಿಕ್ಷಕರಿಗೆ ಪ್ರೋತ್ಸಾಹಧನವಾಗಿ ಮತ್ತು 90,000 ರೂ.ಗಳನ್ನು ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಪೂರೈಕೆಗಾಗಿ ಅನುದಾನ ರೂಪದಲ್ಲಿ ನೀಡಲಾಗುತ್ತದೆ.
ಪ್ರೋತ್ಸಾಹಧನ ಪಡೆಯಲು ಬಯಸುವ ಸರ್ಕಾರಿ ಶಾಲೆಗಳ ಮುಖ್ಯಸ್ಥರು ಜೂನ್ 27ರೊಳಗೆ ಪ್ರಸ್ತಾವನೆಯನ್ನು ಕ್ರೀಡಾಪಟುಗಳ ಸಾಧನೆಯ ವಿವರ, ದೈಹಿಕ ಶಿಕ್ಷಕರ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಸ್ಟೇಡಿಯಂ, ಮಂಗಳೂರು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.








