(ನ್ಯೂಸ್ ಕಡಬ) newskadaba.com ಕಡಬ, ಜೂ. 26. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಪಂಚಾಯತ್‍ನ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಶ್ರೀ ಸಂದೇಶ್ ಕೆ.ಎನ್. ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಕ್ಕಳಿಗೆ ನಾಮ ನಿರ್ದೇಶಿತ ಫಲಕಗಳನ್ನು ಹಸ್ತಾಂತರಿಸಿ, ಮಾತನಾಡಿದ ಇವರು ಮತದಾನದ ಜಾಗೃತಿ ಮತ್ತು ನಾಯಕತ್ವದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್, ಸಂಚಾಲಕರಾದ ಶ್ರೀ ಅಜಿತ್ ರೈ ಎ., ಮುಖ್ಯಗುರುಗಳಾದ ಶ್ರೀ ವಸಂತ ಕೆ. ಇವರು ಉಪಸ್ಥಿತರಿದ್ದರು. ಮುಖ್ಯಗುರುಗಳಾದ ಶ್ರೀ ವಸಂತ ಕೆ. ಸ್ವಾಗತಿಸಿ, ಸಹಶಿಕ್ಷಕಿ ಕು.ಶ್ವೇತಾ ಪಿ.ಕೆ. ವಂದಿಸಿದರು. ಶ್ರೀಮತಿ ಸುಮಂಗಲ ಎ. ಕಾರ್ಯಕ್ರಮ ನಿರೂಪಿಸಿದರು.









