(ನ್ಯೂಸ್ ಕಡಬ) newskadaba.com ಜೂ. 26. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನು ಸಾಗಿಸುತ್ತಿದ್ದ ಈ ಲಾರಿಯು ದಾರಿ ಮಧ್ಯದ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದ ಲಾರಿಯು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








