ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ..!



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 26. ನದಿ ಪಾತ್ರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಕುಮಾರಧಾರ ನದಿಗಿಂತಲೂ ಹೆಚ್ಚಿನ ನೀರಿನ ಹರಿವು ನೇತ್ರಾವತಿ ನದಿಯಲ್ಲಿ ಕಂಡು ಬಂದಿದ್ದು, ದ.ಕ. ಜಿಲ್ಲೆಯ ಜೀವನದಿಯಾದ ನೇತ್ರಾವತಿ ನದಿಯು ಉಪ್ಪಿನಂಗಡಿಯಲ್ಲಿ ಸಮುದ್ರಮಟ್ಟಕ್ಕಿಂತ 28.05 ಮೀ. ಎತ್ತರದಲ್ಲಿ ಹರಿಯುತ್ತಿದೆ. ಇಲ್ಲಿ ನದಿಯ ಅಪಾಯದ ಮಟ್ಟ 31.೦ ಆಗಿದೆ.







 

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ನದಿಗಿಳಿಯಲು ಒಟ್ಟು 36 ಮೆಟ್ಟಿಲುಗಳಿದ್ದು, ಅದರಲ್ಲಿ ಜೂ.25ರ ರಾತ್ರಿ ವೇಳೆ 27 ಮೆಟ್ಟಿಲುಗಳು ಮುಳುಗಿದ್ದು, 9 ಮೆಟ್ಟಿಲುಗಳು ಮಾತ್ರ ಕಾಣುತ್ತಿತ್ತು.






ಉಪ್ಪಿನಂಗಡಿಯಲ್ಲಿ ನೇರವಾಗಿ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ನದಿಯಲ್ಲಿ ನೀರಿನ ಹರಿಯುವಿಕೆಯ ರಭಸ ಹೆಚ್ಚಿದ್ದು, ನೀರಿನೊಂದಿಗೆ ಹರಿದು ಬಂದ ಕಸ- ಕಡ್ಡಿ, ಪ್ಲಾಸ್ಟಿಕ್ ಬಾಟಲಿಗಳು ಸೇರಿದಂತೆ ತ್ಯಾಜ್ಯಗಳು ಹಳೆಯ ಸೇತುವೆಯ ಬಳಿ ಸೇರಿಕೊಂಡಿವೆ. ನದಿ ಪಾತ್ರದ ಪ್ರದೇಶಗಳಲ್ಲಿ ಇನ್ನಷ್ಟು ಮಳೆಯಾದರೆ ಇಲ್ಲಿ ನದಿ ನೀರಿನ ಪ್ರಮಾಣ ಇನ್ನಷ್ಟು ಹೆಚ್ಚಳಗೊಳ್ಳಲಿದೆ.

ದೇವಾಲಯದ ಬಳಿ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಮೊಕ್ಕಾಂ ಹೂಡಿದ್ದು, ಉಪ್ಪಿನಂಗಡಿ ಕಂದಾಯ ಹೋಬಳಿಯ ಉಪ ತಹಶೀಲ್ದಾರ್ ಚೆನ್ನಪ್ಪ ಗೌಡ ಇದರ ನೇತೃತ್ವ ವಹಿಸಿದ್ದಾರೆ.

error: Content is protected !!
Scroll to Top