(ನ್ಯೂಸ್ ಕಡಬ) newskadaba.com ಜೂ. 26. ಮೇ.1 ರಂದು ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳನ್ನು ಬೆಂಗಳೂರಿನ 50ನೇ ಸಿಸಿಎಚ್ ನ್ಯಾಯಾಲಯವು ಎನ್‌ಐಎ ಕಸ್ಟಡಿಗೆ ನೀಡಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲು ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ಆರೋಪಿಗಳನ್ನು ವಶಕ್ಕೆ ನೀಡುವಂತೆ ಎನ್‌ಐಎ ಎಸ್‌ಪಿಪಿ ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಮನವಿಯನ್ನು ಮಾಡಿದ್ದರು.
ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಜು.1 ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.













