ಬೆಳೆ ವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ.







 

ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಣಿಯಾಗಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್‍ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ ಗಳಲ್ಲಿ ಯೋಜನೆಯಡಿ ನೋಂದಾಯಿಸಬಹುದು. ಸಾಮಾನ್ಯ ಸೇವಾ ಕೇಂದ್ರ (CSC) ಮತ್ತು ಗ್ರಾಮ ಒನ್‍ ಗಳ ಮೂಲಕವೂ ನೋಂದಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ ರೂ.6,400 ಹಾಗೂ ರೂ.2,350 ಗಳಾಗಿರುತ್ತದೆ. ಈ ಯೋಜನೆಯಡಿ ನೋಂದಣಿಗೊಳ್ಳಲು ಜುಲೈ 31 ಕೊನೆಯ ದಿನ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ ಟಾಟಾ ಎಐಜಿ (TATA AIG) ಸಂಸ್ಥೆಯು ಆಯ್ಕೆಯಾಗಿದೆ.
ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ದ.ಕ ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ ಡಿ- 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಕೆ- 9449258204, ಬಂಟ್ವಾಳ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, – 9448206393, ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ ಎ- 9731854527, ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಸುಹಾನ ಪಿ.ಕೆ.- 9880993238, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್.- 9448336863, ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶುಭಂ 9131962255 ಸಂಪರ್ಕಿಸಬಹುದು ಎಂದು ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top