(ನ್ಯೂಸ್ ಕಡಬ) newskadaba.com ಜೂ. 27. ಮೈಸೂರಿನ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ ಎಂದಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣರ ಹೇಳಿಕೆಯ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ. ಆ ಬಗ್ಗೆ ಮಾಧ್ಯಮದವರು ಊಹೆ ಮಾಡಿ ಬರೆದರೆ ಏನು ಮಾಡೋಕೆ ಆಗುತ್ತದೆ ಎಂದು ಪ್ರಶ್ನಿಸಿದರು.













