ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಜ್ಞಾನಸೇತು ಅನುಷ್ಠಾನ..!



(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದಲ್ಲಿರುವ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಗುಣಮಟ್ಟದ ಡಿಜಿಟಲ್ ಕಲಿಕೆಗಾಗಿ ಖಾನ್ ಅಕಾಡೆಮಿಯ ಸಹಯೋಗದಲ್ಲಿ ರಾಜ್ಯ ಸರಕಾರವು ಜ್ಞಾನ ಸೇತು ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.







 

ಇದರ ಮೂಲಕ ರಾಜ್ಯದ 21,726 ಹಿರಿಯ ಪ್ರಾಥಮಿಕ ಶಾಲೆ, 4821 ಪ್ರೌಢಶಾಲೆ ಹಾಗೂ 1,229 ಪಿಯು ಕಾಲೇಜುಗಳಲ್ಲಿ ಈಗಾಗಲೇ ಲಭ್ಯವಿರುವ ಎಲ್‌ ಇಡಿ ಪ್ರೊಜೆಕ್ಟರ್‌ ಅಥವಾ ಸ್ಮಾರ್ಟ್‌ ಬೋರ್ಡ್‌ ಗಳನ್ನು ಬಳಸಿಕೊಂಡು ವಾರದಲ್ಲಿ ಒಂದು ದಿನ ಡಿಜಿಟಲ್ ಕಲಿಕೆ ನೀಡಲಾಗುತ್ತದೆ.






 

ಲಾಭರಹಿತ ಸಂಸ್ಥೆಯಾಗಿರುವ ಖಾನ್ ಅಕಾಡೆಮಿಯ ವೆಬ್‌ ಸೈಟ್‌ ನಲ್ಲಿ ಲಾಗಿನ್ ಆಗುವ ಮೂಲಕ ಹಾಗೂ ಮೊಬೈಲ್ ಫೋನ್ ಆ್ಯಪ್ ಮೂಲಕ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಗಣಿತ, ಎಂಜಿನಿಯರಿಂಗ್ ಸಂಬಂಧಿಸಿದ ವಿಷಯಗಳನ್ನು ಕಲಿಯಬಹುದಾಗಿದ್ದು, ಶಿಕ್ಷಕರು ಹಾಗೂ ಉಪನ್ಯಾಸಕರು ಕೂಡ ಖಾನ್ ಅಕಾಡೆಮಿಯ ಕಾನ್‌ ಮಿಗೋ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಬಳಸಿಕೊಂಡು ತರಬೇತಿ ಪಡೆದುಕೊಂಡು ಪಾಠ ಮಾಡಲು ಅವಕಾಶ ಕಲ್ಪಿಸಲಾಗಿದೆ.

error: Content is protected !!
Scroll to Top