(ನ್ಯೂಸ್ ಕಡಬ) newskadaba.com ಜೂ. 28. ಕನ್ನಡದ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ನಟ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ನಟಿಸಿದ್ದ ನಟಿ ಶೆಫಾಲಿ ಜರಿವಾಲಾ(42) ಅವರು ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ವರದಿಯಾಗಿದೆ.
ಶುಕ್ರವಾರದಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಟಿ ಶೆಫಾಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.
ಶೆಫಾಲಿ ಅವರು 1982ರ ಡಿಸೆಂಬರ್ 15ರಂದು ಜನಿಸಿದ್ದರು. ಮುಂಬೈನಲ್ಲಿ ಹುಟ್ಟಿ, ಬೆಳೆದ ಅವರು ಪ್ರಸ್ತುತ ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದರು.















