ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..!



(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ.





ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ಎಸ್ ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಪ್ರಜ್ವಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬದಲಾದ ಪರಿಸ್ಥಿತಿ ಇದ್ದರೆ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಕ್ರಿಯೆ ಉಲ್ಲಂಘಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವಾದಿಸಿದರು.






 

ವಾದ ಆಲಿಸಿದ ಪೀಠವು ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.

error: Content is protected !!
Scroll to Top