“ಅದೊಂದಿತ್ತು ಕಾಲ”- ಶಾಲಾ ಹುಡುಗನ ಪಾತ್ರದಲ್ಲಿ ವಿನಯ್ ರಾಜ್ ಕುಮಾರ್



(ನ್ಯೂಸ್ ಕಡಬ) newskadaba.com ಜೂ. 30. ನಟ ವಿನಯ್ ರಾಜ್‌ಕುಮಾರ್ ಅವರು ‘ಅಂದೊಂದಿತ್ತು ಕಾಲ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ಅವರು ಶಾಲಾ ಹುಡುಗನ ಪಾತ್ರಕ್ಕಾಗಿ ದೇಹದ ತೂಕ ಕಡಿಮೆ ಮಾಡಿಕೊಂಡಿದ್ದರು.





 

ಈ ಕುರಿತು ಮಾತನಾಡಿರುವ ಅವರು, ‘ಈ ಸಿನಿಮಾದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್‌ ನಲ್ಲಿ ಕಾಣಿಸಿಕೊಳ್ಳುವುದು ಚಾಲೆಂಜಿಂಗ್ ಆಗಿತ್ತು. ಒಂದಷ್ಟು ತೂಕ ಕಡಿಮೆ ಮಾಡಿಕೊಂಡೆ. ಚಿಕ್ಕ ಹುಡುಗನ ಮುಗ್ಧತೆ ತೋರಿಸಬೇಕಿತ್ತು. ದೇಹದ ತೂಕ ಕಡಿಮೆ ಮಾಡಿಕೊಳ್ಳುವುದು ಕಷ್ಟವಾಗಿತ್ತು” ಎಂದಿದ್ದಾರೆ.






 

16ನೇ ವಯಸ್ಸು ಅಂದರೆ ತುಂಬಾ ಕಡಿಮೆ. ನಾನು ಹಾಗೆ ಕಾಣಿಸಲ್ಲ ಅಂದುಕೊಂಡಿದ್ದೆ. ಆದರೆ ಆ ಲುಕ್ ಎಲ್ಲರಿಗೂ ಇಷ್ಟವಾಗಿದ್ದು, ಎಲ್ಲರೂ ಪಾಸಿಟಿವ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸಿನಿಮಾದ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ನಿಜ ಜೀವನದಲ್ಲಿ 10ನೇ ತರಗತಿ ಓದುವಾಗ ನಾನು ಬಹಳ ಮುಗ್ಧ ಹುಡುಗ. ಮೂರು ಶೇಡ್ ಗಳಲ್ಲಿ ನನ್ನ ಪಾತ್ರ ಸಾಗುತ್ತದೆ ಎಂದು ಹೇಳಿದ್ದಾರೆ.

error: Content is protected !!
Scroll to Top