ರಸ್ತೆ ಅಪಘಾತ- ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 30. ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್‌ ಬಳಿ ನಡೆದಿದೆ.

 

ಮೃತರನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಗುರುತಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ಬಿ.ಸಿ.ರೋಡ್‌ ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ ಕಡೆಗೆ ದಾಟುವ ಸಂದರ್ಭ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್‌ ಲಾರಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿದಾನಂದರು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ತೀವ್ರ ಗಾಯದೊಂದಿಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top