ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಸುವರ್ಣ ಅವಕಾಶ



(ನ್ಯೂಸ್ ಕಡಬ) newskadaba.com  ಕಡಬ, ಜೂ. 30. ಉದ್ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ /ಮೊಂಟೆಸ್ಸರಿ ಕೋರ್ಸ್‍ ನ್ನು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನಡೆಸಲಾಗುತ್ತಿದೆ.





ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ:






ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಆಸಕ್ತಿಯಿರುವ ಪದವಿಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿರುವ ಮಹಿಳೆಯರು/ಗೃಹಿಣಿಯರು ಈ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಏನಿದು ಮೊಂಟೆಸ್ಸರಿ ಕೋರ್ಸ್:

ಮಾಂಟೆಸ್ಸರಿ ವಿಧಾನದ ತರಬೇತಿಯು ಎಳೆಯ ಮಕ್ಕಳ ಶಿಕ್ಷಕ ವೃತ್ತಿಯಲ್ಲಿ ಒಂದು ಆಕರ್ಷಕ, ಮನಶಾಸ್ತ್ರೀಯ ಆಧಾರದ ತರಬೇತಿಯಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹಳ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇಲ್ಲಿ ನಿರುದ್ಯೋಗಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ತರಬೇತಿ ಪಡೆಯದ ಶಿಕ್ಷಕಿಯರಿಗೂ ಅವಕಾಶವಿದೆ. ತರಬೇತಿ ಬಳಿಕ ಆನೇಕ ಶಾಲೆಗಳಲ್ಲಿ ಸಂದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ.

2025-26ರ ಸಾಲಿನ ಸೀಟುಗಳು ಲಭ್ಯವಿದ್ದು ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9448409912 ದೂರವಾಣಿಯನ್ನು ಸಂಪರ್ಕಿಸಬಹುದು.

 

error: Content is protected !!
Scroll to Top