(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 2025-26 ನೇ ಸಾಲಿನ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ kacdc.Karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.
ಯೋಜನೆಗಳು: ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್ ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ.
ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ 0824-2456544 ಅಥವಾ ಯೋಜನೆಗಳ ಮಾರ್ಗಸೂಚಿಗಳು,ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ವಿವರಗಳನ್ನು ವೆಬ್‍ಸೈಟ್ kacdc.karnataka.gov.in ಮೂಲಕ ಪಡೆಯಬಹುದು ಎಂದು ನಿಗಮದ ಜಿಲ್ಲಾ ವ್ಯವಸಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ: ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನ









