ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 2025-26ನೇ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.







ಯೋಜನೆಗಳು:- ಅರಿವು ಶೈಕ್ಷಣಿಕ ಸಾಲ ಯೋಜನೆ (Fresh Students) ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ.






 

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನ.

 

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://ambigaradevelopment.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-22864099 ಸಂಪರ್ಕಿಸಬಹುದು ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top