ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ



(ನ್ಯೂಸ್ ಕಡಬ) newskadaba.com ಜು. 01. ದಕ್ಷಿಣ ಕನ್ನಡ ಜಿಲ್ಲಾ  ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ನಿರ್ದೇಶಕರು  ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಮಹತ್ತರವಾಗಿದೆ. ಸರಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಸರಕಾರದ ಯಶಸ್ಸಿನಲ್ಲಿ ಕೈಜೋಡಿಸಬೇಕು. ಸಂಘವು ಉತ್ತಮ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಲತೇಶ್ ಕುಮಾರ್, ಕೋಶಾಧಿಕಾರಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಂಬರೀಶ್ ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.







error: Content is protected !!
Scroll to Top