ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸಮೀಕ್ಷೆ



(ನ್ಯೂಸ್ ಕಡಬ) newskadaba.com ಜು. 02. ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ಗ್ರಾಮೀಣ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಿಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಯ್ದುಕೊಳ್ಳಲು ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಈ ಎಲ್ಲಾ ಘಟಕಾಂಶಗಳ ಪ್ರಗತಿ ಹಾಗೂ ಸುಸ್ಥಿರತೆಯಲ್ಲಿ ಸಮುದಾಯ ಭಾಗವಹಿಸುವಿಕೆಗೆ ಹಮ್ಮಿಕೊಂಡಿರುವ ಹಲವು ಚಟುವಟಿಕೆಗಳ ಕುರಿತು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಪ್ರತಿ ವರ್ಷ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪ್ರಸ್ತುತ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025” ರ ಸಮೀಕ್ಷೆ ಕಾರ್ಯಕ್ಕೆ ಜೂನ್ 22 ರಿಂದ ಜುಲೈ 15ರ ವರೆಗೆ Academy of Management Studies(AMS) Lucknow ಎಂಬ ಸಂಸ್ಥೆಯನ್ನು ನೇಮಿಸಿದ್ದು, ಈ ಸಂಸ್ಥೆಯ ಪ್ರತಿನಿಧಿಗಳು ನಿಗದಿತ ದಿನಾಂಕದಂದು ಕೇಂದ್ರ ಸರ್ಕಾರ ನೀಡಿರುವ ಗ್ರಾಮಗಳಿಗೆ ನೇರವಾಗಿ ಸರ್ವೇ ಕಾರ್ಯಕ್ಕೆ ಭೇಟಿ ನೀಡಿ ಸರ್ವೆ ನಡೆಸಲಿದ್ದಾರೆ. ಅದರಂತೆ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಈವರೆಗೆ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ನಿರ್ಮಿಸಿದ ವಿವಿಧ ಘಟಕಗಳು ನಿರಂತರ ಕಾರ್ಯಾಚರಣೆ ಮತ್ತು ಸುಸ್ಥಿರತೆ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು. ಹಾಗೂ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025ರ ಕುರಿತು ಗ್ರಾಮ ಪಂಚಾಯಿತಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವಂತಹ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ನಡೆಸಬೇಕು.
SBMG ಯೋಜನೆಯಡಿ ಗ್ರಾಮಗಳಲ್ಲಿ ಕೈಗೊಳ್ಳಲಾದ ಕಾರ್ಯಚಟುವಟಿಕೆಗಳ ಮೌಲ್ಯಮಾಪನ, ಮೇಲ್ವಿಚಾರಣೆ ಮತ್ತು ಶ್ರೇಣೀಕರಣದ ಉದ್ದೇಶದಿಂದ ಪ್ರಾರಂಭಿಸಲಾದ ‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2025’ ಅಭಿಯಾನದಲ್ಲಿ ತಪ್ಪದೇ ಸರ್ವೇಯಲ್ಲಿ ಭಾಗಿಯಾಗಲು ಕೂಡಲೇ ಪ್ಲೇಸ್ಟೋರ್ʼನಲ್ಲಿ SSG 2025 ಆಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು. “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ” 2025ರ ಸರ್ವೆ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಲು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top