UAE ಏಷ್ಯಾಕಪ್ ಟೂರ್ನಿ: ಸೆ.7ರಂದು ಬಾರತ್-ಪಾಕ್ ಹಣಾಹಣಿ



(ನ್ಯೂಸ್ ಕಡಬ) newskadaba.com ಜು. 02. ಸೆಪ್ಟೆಂಬರ್ ಐದರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 21ರಂದು ಫೈನಲ್ ಪಂದ್ಯ ನಡೆಯಲಿದೆ.





17 ದಿನಗಳ ಟೂರ್ನಿಯ ವೇಳಾಪಟ್ಟಿ ಇದೀಗ ಬಹುತೇಕ ಪೂರ್ಣಗೊಂಡಿದ್ದು, ಏಷ್ಯಾ ಕ್ರಿಕೆಟ್ ಮಂಡಳಿಯ ಆರಂಭಿಕ ವೇಳಾಪಟ್ಟಿಯ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಸೆಪ್ಟೆಂಬರ್ 7ರಂದು ನಡೆಯಲಿದೆ.






ಟೂರ್ನಿಯ ಅಧಿಕೃತ ಆತಿಥ್ಯ ವಹಿಸುವ ಭಾರತ ಸೇರಿದಂತೆ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ದೇಶಗಳು ಟೂರ್ನಿಯಲ್ಲಿ ಭಾಗವಹಿಸಲು ತಮ್ಮ ಸರ್ಕಾರಗಳಿಂದ ಅನುಮತಿ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಯುಎಇ ಟೂರ್ನಿಯಲ್ಲಿ ಭಾಗವಹಿಸಲಿದ್ದು, ಗುಂಪುಹಂತ ಮತ್ತು ಸೂಪರ್ ಫೋರ್ ವಿಧಾನದಲ್ಲಿ ಸ್ಪರ್ಧೆಗಳು ನಡೆಯಲಿವೆ. ಅಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಕಾಳಗವನ್ನು ಕ್ರಿಕೆಟ್ ಪ್ರೇಮಿಗಳು ಕನಿಷ್ಠ ಎರಡು ಬಾರಿ ವೀಕ್ಷಿಸಲು ಅವಕಾಶವಾಗಲಿದೆ ಎಂದು ಹೇಳಲಾಗುತ್ತಿದೆ. ಎರಡನೇ ಪಂದ್ಯ ಸೆಪ್ಟೆಂಬರ್ 14ರಂದು ನಡೆಯುವ ಸಾಧ್ಯತೆ ಇದೆ.

error: Content is protected !!
Scroll to Top