ಎಸ್.ಎಸ್.ಎಲ್.ಸಿ. ಪರೀಕ್ಷೆ-3 : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 04. ಎಸ್.ಎಸ್.ಎಲ್.ಸಿ. ಪರೀಕ್ಷೆ-3  ಜುಲೈ 5 ರಿಂದ  ಜುಲೈ 12 ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ  ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನ  4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ನಿಟ್ಟಿನಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

Scroll to Top