ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..!



(ನ್ಯೂಸ್ ಕಡಬ) newskadaba.com ಜು. 05. ಕೆಎಸ್‌ಆರ್‌ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.





ಮೃತಪಟ್ಟ ಯುವಕನನ್ನು ನೀಲಸಂದ್ರದ ನಿವಾಸಿ ಮಹಮ್ಮದ್ ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಮಹಮ್ಮದ್ ಅಜರ್ ಪಾಷಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಜಿ ರಸ್ತೆಯ ಮೈಸೂರು ಬ್ಯಾಂಕ್ ಜಂಕ್ಷನ್ ಬಳಿ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅಜರ್ ಪಾಷಾರನ್ನು ಆಸ್ಪತ್ರೆಗೆ ಕರೆದೊಯ್ದದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.






ಘಟನಾ ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರಿ ಠಾಣೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top