ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ



(ನ್ಯೂಸ್ ಕಡಬ) newskadaba.com ಜು. 05. ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.





2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.






 

ರನ್ಯಾ ರಾವ್‌ ಅವರನ್ನು ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

error: Content is protected !!
Scroll to Top