5 ಬಸ್ ಗಳ ನಡುವೆ ಸರಣಿ ಅಪಘಾತ 36 ಯಾತ್ರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಂಬನ್, ಜು05. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರಿದ್ದ ಐದು ಬಸ್ ಗಳು ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಕನಿಷ್ಠ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಸ್‌ ಗಳು ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

Scroll to Top