3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿ ಅರೆಸ್ಟ್..!

crime, arrest, suspected


(ನ್ಯೂಸ್ ಕಡಬ) newskadaba.com ಜು. 05. ಮೂರು ವರ್ಷದ ಹಿಂದೆ ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.







ಬಂಧಿತ ಆರೋಪಿಯನ್ನು ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರುತಿಸಲಾಗಿದೆ.






 

ಆರೋಪಿಯು 2022ರ ಮಾರ್ಚ್ 20ರಂದು ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ 1,50,000ರೂ. ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಮಾಡಿದ್ದನು.

ಅನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಸುಳ್ಯ ಠಾಣಾ ಪೊಲೀಸರು ತಮಿಳುನಾಡಿನ ಕೊಯಮತ್ತೂರಿನಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

error: Content is protected !!
Scroll to Top