ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ನಿರ್ಧಾರ..!



(ನ್ಯೂಸ್ ಕಡಬ) newskadaba.com ಜು. 07.  ಇತ್ತಿಚಿನ ದಿನಗಳಲ್ಲಿ ಯುವ ವಯಸ್ಸಿನವರು ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ.







ಪ್ರತೀ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.






ಇದೀಗ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ ಕಾರಣ ಮತ್ತು ಮುಂಜಾಗೃತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

ಅಲ್ಲದೇ ಈ ಸಂದರ್ಭದಲ್ಲಿ ಇಂದಿನ ಕಾಲದ ಆಹಾರ ಪದ್ದತಿಗಳು ಮತ್ತು ಬದಲಾದ ಜೀವನ ಶೈಲಿಯೇ ಹೃದಯಾಘಾತಕ್ಕೆ ಕಾರಣವಾಗಿದ್ದು, ಆದರೆ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆಯಲು ಕುಟುಂಬಿಕರ ಮನವೊಲಿಸಿ ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

error: Content is protected !!
Scroll to Top