(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3 ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷದವರು ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 25.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್‍ಸೈಟ್ https://sahithyaacademy.karnataka.gov.in ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ









