ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 08.  ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನಗಳು ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.







1ರಿಂದ 10 ನೇ ತರಗತಿಯವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದೆ ಬಾಳೆಹಣ್ಣು ಕೊಡ್ತಿದ್ದಾರೆ.






762 ಶಾಲೆಗಳಲ್ಲಿ ಪರಿಶೀಲನೆ ಮಾಡಿದಾಗ ಸುಮಾರು 568 ಶಾಲೆಗಳಲ್ಲಿ ಮೊಟ್ಟೆ ಕಡ್ಡಾಯವಾಗಿ ಕೊಡುತ್ತಿಲ್ಲದ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 568 ಶಾಲೆಗಳಿಗೆ ಭೇಟಿ ನೀಡಿ SDMC ಅವರಿಗೆ ತಿಳುವಳಿಕೆ ಹೇಳಬೇಕು ಎಂದು DDPIಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

error: Content is protected !!
Scroll to Top