ಜುಲೈ 9 ರಂದು ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಮಂಗಳೂರು, ಲಿಂಕ್ ವ್ಯಸನ ಮುಕ್ತ ಪುನರ್ವಸತಿ ಕೇಂದ್ರ ಹಾಗೂ ಸಂತ ಅಲೋಶಿಯಸ್ ಪರಿಣಿತ ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ನಾಳೆ ಜುಲೈ 9ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎರಿಕ್ ಮಾಥಯಾಸ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top