ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು



(ನ್ಯೂಸ್ ಕಡಬ) newskadaba.com, ಜು. 10. ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ.







ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರು. ಜು.7ರಂದು ಬೆಳಗ್ಗೆ ವಿಟ್ಲ – ಮುಡಿಪು- ಮಂಗಳೂರು ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿ ಏರಿದ್ದ ಚಿದಾನಂದ ಅವರು ಕುಡ್ತಮುಗೇರು ನಿಲ್ದಾಣ ತಲುಪುತ್ತಿದ್ದಂತೆ ಮೆಟ್ಟಿಲಿನಲ್ಲಿ ನಿಂತಿದ್ದು ಅವರು ಆಯತಪ್ಪಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದರು.






ಬಳಿಕ ಬಸ್ಸಿನ ಸಿಬ್ಬಂದಿ ಉಪಚರಿಸಲು ಮುಂದಾದಾಗ ನನಗೇನೂ ಆಗಿಲ್ಲ ಎಂದು ಬಸ್ಸನ್ನು ತೆರಳುವಂತೆ ಸೂಚಿಸಿದ್ದರು. ಸಾಯಂಕಾಲದ ವೇಳೆ ಚಿದಾನಂದ ರವರು ಹಠಾತ್ ಅಸ್ವಸ್ಥಗೊಂಡಿದ್ದರು. ಸ್ಥಳೀಯರು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಜು.8ರಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top