ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ



(ನ್ಯೂಸ್ ಕಡಬ) newskadaba.com, ಜು. 10. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.







ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹಿರಾತು ನೀಡಿತ್ತು.






ಪಕ್ಷದ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ರದ್ದತಿ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

error: Content is protected !!
Scroll to Top