(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಸರ್ಕಾರಕ್ಕೆ ಸಲ್ಲಿಸಿದ ನ್ಯಾ. ಮೈಕಲ್ ಕುನ್ಹಾ ಅವರ ವರದಿಯಲ್ಲಿ ಮತ್ತಷ್ಟು ಸ್ಫೋಟಕ ಅಂಶ ಬಹಿರಂಗವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿದೆ. ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಮತ್ತು ಪೊಲೀಸರ ವಿರುದ್ಧ ದಂಡನೀಯ ಪ್ರಕರಣ ದಾಖಲು ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.













