ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ



(ನ್ಯೂಸ್ ಕಡಬ) newskadaba.com, ಜು. 14. ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.







ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಬಹುನಿರೀಕ್ಷಿತ ಕೇಬಲ್-ಸ್ಟೇಡ್ ಸೇತುವೆಯು ರಾಜ್ಯದಲ್ಲಿಯೇ ಅತಿ ಉದ್ದವಾಗಿದೆ ಮತ್ತು ದೇಶದಲ್ಲಿಯೇ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ. 2.44 ಕಿ.ಮೀ.: ಸಿಂಗದೂರು ಸೇತುವೆಯ ಒಟ್ಟು ಉದ್ದ 16 ಮೀ.: ಸೇತುವೆ ಹೊಂದಿರುವ ಅಗಲದ ದ್ವಿಪಥದ ಸೇತುವೆ ನಿರ್ಮಾಣಕ್ಕೆ ಒಟ್ಟು 473 ಕೋಟಿ ರೂ ವೆಚ್ಚವಾಗಿದೆ.






ಸಾಗರ ಮತ್ತು ಹೊಸನಗರ ತಾಲ್ಲೂಕುಗಳ ಹಲವಾರು ಹಳ್ಳಿಗಳಿಗೆ ಹಾಗೂ ಸಿಗಂದೂರು ಚೌಡೇಶ್ವರಿ ಮತ್ತು ಕೊಲ್ಲೂರು ಮೂಕಾಂಬಿಕೆಯಂತಹ ಜನಪ್ರಿಯ ದೇವಾಲಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. 70ರ ದಶಕದಲ್ಲಿ ಶರಾವತಿ ನದಿಗೆ ಲಿಂಗನಮಕ್ಕಿ ಡ್ಯಾಮ್ ಕಟ್ಟಿದಾಗ ಅದರ ಹಿನ್ನೀರಿನಿಂದ ಸಾಗರ ತಾಲೂಕಿನ ಶರಾವತಿ ಕಣಿವೆ 2 ಭಾಗವಾಗಿ ವಿಭಜನೆಯಾಯಿತು.

ಇದರಿಂದ ನದಿಯ ಒಂದು ಭಾಗದಲ್ಲಿ ಉಳಿದವರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಬದುಕುವಂತಾಗಿತ್ತು. ಅಲ್ಲಿನ ಜನ 2 ಕಿಮೀ ಅಂತರದ ನದಿ ದಾಟಲು ವ್ಯವಸ್ಥೆ ಇಲ್ಲದೇ ಸಾಗರ ತಾಲೂಕು ಕೇಂದ್ರವನ್ನು ತಲುಪಬೇಕಾದರೆ ಸುಮಾರು 80 ರಿಂದ 100 ಕಿ.ಮೀ. ರಸ್ತೆ ಮಾರ್ಗದಲ್ಲಿ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

error: Content is protected !!
Scroll to Top