(ನ್ಯೂಸ್ ಕಡಬ) newskadaba.com, ಜು. 14. ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ನಡೆದಿದೆ.
ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್ ಮೇಲೆ ಬಿದ್ದಾಗ ಇದು ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವು ಲಾರಿಯ ಮೇಲೆ ಸುಮಾರು 20 ಕ್ಕೂ ಹೆಚ್ಚು ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.














