ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ

(ನ್ಯೂಸ್ ಕಡಬ) newskadaba.com, ಜು. 14. ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕವೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಿಸಿರಲಿಲ್ಲ. ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಏಳು ದಿನಗಳೊಳಗೆ ಘಟನೆಯ ಬಗ್ಗೆ ವರದಿ ನೀಡುವಂತೆ ಪತ್ರ ಬರೆಯಲಾಗಿದೆ.

Scroll to Top