ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ



(ನ್ಯೂಸ್ ಕಡಬ) newskadaba.com, ಜು.15. ಬಳ್ಳಾರಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸರಣಿ ಸಾವುಗಳು ಮುಂದುವರಿದಿವೆ. ಇದೀಗ ಬಳ್ಳಾರಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. 6ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಈ ದುರಂತ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.







ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದ ಬಾಲಕಿ ದೀಕ್ಷಾಳನ್ನು ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಮುಂದಾದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top