ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್



(ನ್ಯೂಸ್ ಕಡಬ) newskadaba.com, ಜು.15. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ. ಮೌಲ್ಯದ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಕಂದಾಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಓರ್ವ ಭಾರತೀಯ ಮಹಿಳೆಯನ್ನು ಬಂಧಿಸಿದ್ದಾರೆ.







ಜು.14ರಂದು ಬಂಧಿತ ಮಹಿಳೆ ದೋಹಾದಿಂದ ಮುಂಬೈ ಬಂದಿಳಿದಿದ್ದರು. ಈ ವೇಳೆ ಗುಪ್ತಚರ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 6 ಬಿಸ್ಕಟ್‌ ಬಾಕ್ಸ್ ಹಾಗೂ ಮೂರು ಚಾಕೋಲೇಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಈ 9 ಬಾಕ್ಸ್‌ಗಳಲ್ಲಿ ಕೊಕೇನ್ ಎಂದು ಹೇಳಲಾದ ಬಿಳಿ ಪುಡಿಯ ವಸ್ತು ತುಂಬಿದ ಕ್ಯಾಪ್ಸುಲ್‌ಗಳ ಪತ್ತೆಯಾಗಿವೆ.






ಪತ್ತೆಯಾದ ವಸ್ತುವನ್ನು ಸ್ಥಳದಲ್ಲಿಯೇ ಕಿಟ್‌ಗಳನ್ನು ಬಳಸಿ ಪರೀಕ್ಷೆಗೊಳಪಡಿಸಿದಾಗ ಕೊಕೇನ್ ಎಂದು ದೃಢಪಟ್ಟಿದೆ. ಈ ಮೂಲಕ ಸುಮಾರು 62.6 ಕೋಟಿ ರೂ. ಮೌಲ್ಯದ 6,261 ಗ್ರಾಂ ಕೊಕೇನ್ ಇರುವ 300 ಕ್ಯಾಪ್ಸುಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ 1985ರ ಮಾದಕ ದ್ರವ್ಯಗಳು ಕಾಯ್ದೆಯಡಿ ಮಹಿಳೆಯನ್ನು ಬಂಧಿಸಿ, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

error: Content is protected !!
Scroll to Top