ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಕಾಲೇಜು ಉಪನ್ಯಾಸಕರು ಸೇರಿ ಮೂವರು ಬೆಂಗಳೂರಿನಲ್ಲಿ ಬಂಧನ

(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಇಡೀ ರಾಜ್ಯವೇ ತಲೆತಗ್ಗಿಸುವಂತಹ ಮತ್ತೊಂದು ಘಟನೆ ನಡೆದಿದೆ. ವಿದ್ಯೆ ಕಲಿಸುವ ಶಿಕ್ಷಕರೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

Scroll to Top