(ನ್ಯೂಸ್ ಕಡಬ) newskadaba.com, ಜು.15. ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್‌ನಲ್ಲಿ ಜು.16ಕ್ಕೆ ಜಾರಿಯಾಗಲಿದ್ದ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಜಾರಿಗೊಳಿಸಲು ಬುಧವಾರಕ್ಕೆ ದಿನಾಂಕ ನಿಗದಿಯಾಗಿತ್ತು. ಈ ನಡುವೆ ಅವರ ರಕ್ಷಣೆಗೆ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಯೆಮನ್‌ನ ಪ್ರಮುಖ ಸೂಫಿ ವಿದ್ವಾಂಸ ಶೇಖ್ ಹಬೀರ್ ಉಮರ್ ಬಿನ್ ಹಾಫಿಝ್ ಅವರ ಮೂಲಕ ನಡೆಸಿದ ಪ್ರಯತ್ನ ಫಲಪ್ರದವಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.














