ರೌಡಿಶೀಟರ್ ಹತ್ಯೆ ಕೇಸು: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.

ನಿನ್ನೆ ಮಂಗಳವಾರ ರಾತ್ರಿ ನಗರದ ಭಾರತಿ ನಗರದಲ್ಲಿ ಹಲ್ಲೆಕೋರರು ಕಾರಿನಲ್ಲಿ ಬಂದು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ. ಮೃತನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಭೈರತಿ ಬಸವರಾಜ್ ಜೊತೆಗೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನಲ್ಲಿ, ಎಂಟರಿಂದ ಒಂಬತ್ತು ಜನರು ತಮ್ಮ ಮಗನ ಮೇಲೆ ಕಬ್ಬಿಣದ ರಾಡ್ ಮತ್ತು ಮಚ್ಚಿನಿಂದ ಹಲ್ಲೆ ನಡೆಸುತ್ತಿರುವುದನ್ನು ನೋಡಿರುವುದಾಗಿ ಹೇಳಿದ್ದಾರೆ. ಸ್ನೇಹಿತ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರನ್ನೂ ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾರೆ

Scroll to Top