(ನ್ಯೂಸ್ ಕಡಬ) newskadaba.com, ಜು.16. ಮಂಗಳೂರು, ಜು.16: ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪು ಕಲ್ಲು, ಮರಳು ಸಿಗುತ್ತಿಲ್ಲವೆಂದು ರಸ್ತೆಯಲ್ಲಿ ನಿಂತು ಮಾತನಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಲ್ಲ. ಆದರೆ ದ.ಕ. ಜಿಲ್ಲೆಯ ಬಿಜೆಪಿ ಶಾಸಕರು ಅದನ್ನೇ ಮಾಡುತ್ತಿದ್ದಾರೆ. ಅವರು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ ಎಂದು ಹೇಳಿದರು.









