ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ



(ನ್ಯೂಸ್‌ ಕಡಬ) newskadaba.com ಜು. 20: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ SIT ರಚಿಸಿ ತನಿಖೆಗೆ ಆದೇಶಿಸಿದ್ದಾರೆ.







ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.






ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.

ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಎಸ್ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅತ್ಯಾ*ಚಾರ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು “ಕರ್ನಾಟಕದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು” ತನಿಖೆ ಮಾಡಲು “ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ” ಎಂದು ಶನಿವಾರ ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಧರ್ಮಸ್ಥಳ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿ ನೂರಾರು ಅಪರಿಚಿತ ಶವ ಹೂತಿದ್ದೇನೆ ಎಂದು ಹೇಳುತ್ತಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು.ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.

error: Content is protected !!
Scroll to Top