ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಜು. 21. ಖಾಸಗಿ ಬಸ್ಸೊಂದು ಸೇತುವೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾ ತಾಲೂಕು ವ್ಯಾಪ್ತಿಯ ಅಗಸೂರು ಬಳಿ ನಡೆದಿದೆ.

ಯಲ್ಲಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಈ‌ ಅವಘಡ ನಡೆದಿದೆ.

 

ಘಟನೆಯಲ್ಲಿ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Scroll to Top