(ನ್ಯೂಸ್ ಕಡಬ) newskadaba.com ಜು. 22: ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65)ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.









