ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com ಜು.23: ಬೆಂಗಳೂರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ (ಜು.22)ಮಂಗಳವಾರದಂದು ಭರ್ಜರಿ ಮಳೆಯಾಗಿದ್ದು, ಅದೇ ರೀತಿ ಜುಲೈ 28ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜುಲೈ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Scroll to Top