(ನ್ಯೂಸ್ ಕಡಬ) newskadaba.com ಜು.23: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ









