ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳ ಅಧಿಕೃತ ಪ್ರವಾಸ ವೇಳೆ ಪ್ರಧಾನಿ ಮೋದಿ ಇಂಗ್ಲೆಂಡ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ನಂತರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಲಿದ್ದಾರೆ. ಲಂಡನ್ ಬಳಿಯ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ ಚೆಕರ್ಸ್‌ನಲ್ಲಿ ಸ್ಟಾರ್ಮರ್ ಅವರನ್ನು ಆತಿಥ್ಯ ವಹಿಸಲಿದ್ದಾರೆ.

ಇನ್ನು ಪ್ರಧಾನಿ ಮೋದಿಗೆ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಸಾಥ್‌ ನೀಡಿದ್ದಾರೆ. ಅವರು ಇಂಗ್ಲೆಂಡ್‌ ಸಚಿವ ಜೋನಾಥನ್ ರೆನಾಲ್ಡ್ಸ್ ಜೊತೆ ಮುಕ್ತ ವ್ಯಾಪಾರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಆ ಮೂಲಕ ಸತತ ಮೂಲಕ ಮೂರು ವರ್ಷಗಳ ನಡುವಿನ ಭಾರತ ಬೇಡಿಕೆಗೆ ಅಂತ್ಯ ಹಾಡಲಿದ್ದಾರೆ. ಸುಂಕಗಳನ್ನು ತೆಗೆದುಹಾಕುವ ಮೂಲಕ ಭಾರತದಿಂದ ರಫ್ತಾಗುವ ಸುಮಾರು 99 ಪ್ರತಿಶತದಷ್ಟು ಉತ್ಪನ್ನಗಳಿಗೆ ಸುಂಕ ಮುಕ್ತ ಪ್ರಯೋಜನವನ್ನು ನೀಡುವ ಮತ್ತು ಬ್ರಿಟಿಷ್ ಸಂಸ್ಥೆಗಳು ಭಾರತಕ್ಕೆ ವಿಸ್ಕಿ ಮತ್ತು ಕಾರುಗಳಂತಹ ಉತ್ಪನ್ನಗಳನ್ನು ಹೆಚ್ಚು ಸುಲಭವಾಗಿ ರಫ್ತು ಮಾಡಲು ಸಹಾಯ ಮಾಡುವ ಒಪ್ಪಂದಕ್ಕೆ ಸಂಬಂಧಿಸಿದಂತೆ “ಕೊನೆಯ ಕ್ಷಣದ ಕೆಲಸ” ನಡೆಯುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ದೃಢಪಡಿಸಿದರು.

Scroll to Top