ಮಂಗಳೂರು ವಿವಿ: ವಿವಿಧ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಶೈಕ್ಷಣಿಕ ವರ್ಷ 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳ ಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು/ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾದ ಸೀಟುಗಳು) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ/ ಬಿ.ಪಿ.ಎಡ್/ಡಿಪ್ಲೋಮಾ/ ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top